ಪಟ್ಟಣ ಪಂಚಾಯಿತಿ ಸದಸ್ಯನಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿಯೇ ಅರೆಸ್ಟ್

ಶೃಂಗೇರಿ: ಅಪ್ರಾಪ್ತ ಬಾಲಕರ ಮೇಲೆ ಪಟ್ಟಣ ಪಂಚಾಯಿತಿ ಸದಸ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಜಕೀಯ ದ್ವೇಷಕ್ಕೆ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯ ಶಬರೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಮುಖಂಡ, ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಶೆಟ್ಟಿ ವಿರುದ್ಧ ಅಪ್ರಾಪ್ತ ಬಾಲಕರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡಿತ್ತು. ಮಂಗಳವಾರ ಪ್ರಕರಣ ತಿರುವು ಪಡೆದುಕೊಂಡಿದ್ದು, ಆರೋಪ ಮಾಡಿದ್ದ ವ್ಯಕ್ತಿಯೇ ಬಂಧನಕ್ಕೊಳಗಾಗಿದ್ದಾನೆ. ಇನ್ನೊಬ್ಬ ಆರೋಪಿ ಸೂರ್ಯ ತಲೆಮರೆಸಿಕೊಂಡಿದ್ದಾನೆ.

ದಲಿತ ಬಾಲಕರನ್ನು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿರುವುದಾಗಿ ಆರೋಪಿಸಿದ್ದ ವಿಡಿಯೋ ಹರಿದಾಡಿತ್ತು. ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪ ಸುಳ್ಳು ಎಂದು ಗೊತ್ತಾಗಿದೆ. ಅಪ್ರಾಪ್ತ ಬಾಲಕರ ಬಳಕೆ ಮಾಡಿಕೊಂಡು ಒತ್ತಾಯ ಪೂರ್ವಕವಾಗಿ ವಿಡಿಯೋ ಚಿತ್ರೀಕರಣ ಮಾಡಿದ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಬರೀಶ್ ನನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read