ರಮ್ಯಾರನ್ನು BJPಗೆ ಆಹ್ವಾನಿಸುವಷ್ಟು ನಮ್ಮ ಪಕ್ಷ ಬರಗೆಟ್ಟಿಲ್ಲ; ಸಚಿವ ಆರ್. ಅಶೋಕ್ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಸ್ಟಾರ್ ಪ್ರಚಾರಕರಾಗಿರುವ ನಟಿ ರಮ್ಯಾ, ತಮ್ಮನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರೊಬ್ಬರು ಆಹ್ವಾನಿಸಿದ್ದರು. ಮಂತ್ರಿ ಮಾಡುವುದಾಗಿಯೂ ಹೇಳಿದ್ದರು ಇದೀಗ ರಮ್ಯಾ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ. ರಮ್ಯಾ ಹೇಳಿಕೆಗೆ ಟಾಂಗ್ ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ನಟಿ ರಮ್ಯಾರನ್ನು ನಮ್ಮ ಪಕ್ಷಕ್ಕೆ ಆಹ್ವಾನ ಮಾಡುವಷ್ಟು ಬಿಜೆಪಿ ಬರಗೆಟ್ಟಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ರಮ್ಯಾ ತಮ್ಮನ್ನು ಬಿಜೆಪಿ ಆಹ್ವಾನಿಸಿತ್ತು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಆದರೆ ಬಿಜೆಪಿ ಅವರನ್ನು ಆಹ್ವಾನಿಸಿಲ್ಲ. ನಮ್ಮ ಪಕ್ಷ ಅಷ್ಟು ಬರಗೆಟ್ಟಿಲ್ಲ. ನಟಿ ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದವರು, ಕಾಂಗ್ರೆಸ್ ಸಂಸದೆಯಾಗಿದ್ದವರು, ಈಗ ಕಾಂಗ್ರೆಸ್ ನ ಸ್ಟಾರ್ ಪ್ರಚಾರಕರಾಗಿದ್ದಾರೆ. ಅವರನ್ನು ನಾವ್ಯಾಕೆ ಆಹ್ವಾನ ಮಾಡ್ತೀವಿ? ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೇ ಟಿಕೆಟ್ ಕೊಟ್ಟಿಲ್ಲ. ಇನ್ನು ರಮ್ಯಾಗೆ ಯಾಕೆ ಕರೆದು ಸಚಿವ ಸ್ಥಾನ ಕ್ಕೊಡೋಣ? ರಮ್ಯಾರನ್ನು ನಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನಿಸಿಲ್ಲ ಇದು ಸುಳ್ಳು ಎಂದು ಸ್ಪಷ್ಟಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read