HomeInternationalಏಕಕಾಲಕ್ಕೆ 4 ಗಂಡು, 2 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ: ಆರೋಗ್ಯವಾಗಿವೆ ಎಲ್ಲಾ ಶಿಶುಗಳು

ಏಕಕಾಲಕ್ಕೆ 4 ಗಂಡು, 2 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ: ಆರೋಗ್ಯವಾಗಿವೆ ಎಲ್ಲಾ ಶಿಶುಗಳು

ರಾವಲ್ಪಿಂಡಿ: ಪಾಕಿಸ್ತಾನದಲ್ಲಿ ಅಪರೂಪದ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಏಕಕಾಲಕ್ಕೆ ಆರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ರಾವಲ್ಪಿಂಡಿಯ ಆಸ್ಪತ್ರೆಯಲ್ಲಿ 27 ವರ್ಷದ ಮಹಿಳೆ ನಾಲ್ಕು ಗಂಡು ಮತ್ತು ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಮೊಹಮ್ಮದ್ ವಹೀದ್ ಅವರ ಪತ್ನಿ ಜೀನತ್ ವಹೀದ್ ಎಂದು ಗುರುತಿಸಲಾಗಿರುವ ಮಹಿಳೆ ಶುಕ್ರವಾರ ಜಿಲ್ಲಾ ಆಸ್ಪತ್ರೆಯಲ್ಲಿ 6 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಜೀನತ್ ಒಂದು ಗಂಟೆಯ ಅವಧಿಯಲ್ಲಿ ಎಲ್ಲಾ ಆರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾವಲ್ಪಿಂಡಿಯ ಹಾಜಿರಾ ಕಾಲೋನಿಯಲ್ಲಿ ನೆಲೆಸಿರುವ ಜೀನತ್ ವಹೀದ್ ಗರ್ಭಿಣಿಯಾಗಿದ್ದು, ಗುರುವಾರ ಹೆರಿಗೆ ನೋವು ಕಾಣಿಸಿಕೊಂಡ ನಂತರ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು.

ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡಿ, ಆರು ಶಿಶುಗಳಲ್ಲಿ ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ತಾಯಿ ಸೇರಿದಂತೆ ಎಲ್ಲಾ ಶಿಶುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಶಿಶುಗಳು ಉತ್ತಮ ಆರೋಗ್ಯ ಹೊಂದಿವೆ. ಅವರೆಲ್ಲರೂ ತಲಾ ಎರಡು ಪೌಂಡ್‌ಗಳಿಗಿಂತ ಕಡಿಮೆ ತೂಕವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular