HomeKarnatakaಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ; ಯುವಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ; ಯುವಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಬೆಂಗಳೂರು: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಯುವಕನೊಬ್ಬನನ್ನು ಹಿಡಿದು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಬಾಲಕಿಯೊಂದಿಗೆ ಯುವಕ ಅನುಚಿತವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವಕನನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು, ಆತನ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular