ಚಿಕ್ಕಬಳ್ಳಾಪುರ : ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಗೋಡೆ ಮೇಲೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಕುಖ್ಯಾತ ಅಂತರಾಷ್ಟ್ರೀಯ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಅರೆಮನೆ ಗೋಡೆ ಮೇಲೆ ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ ವರ್ತನೆಗೆ ಪ್ರವಾಸಿಗರು ಅಸಮಾಧಾನ ಹೊರಹಾಕಿದ್ದಾರೆ.
ಭಾರತೀಯ ಪುರಾತತ್ವ ಇಲಾಖೆ ಅಧೀನದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಗೋಡೆ ಮೇಲೆ ಬರಹ ಕಂಡು ಬಂದಿದೆ. ಕಿಡಿಗೇಡಿಗಳನ್ನು ಬಂಧಿಸಿ ಸೂಕ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
