ಬೆಂಗಳೂರು : ಬೆಂಗಳೂರಲ್ಲಿ ದುಷ್ಕರ್ಮಿಗಳು ಉದ್ಯಮಿ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದ್ದು, ಅವರ ಕತ್ತಿನ ಭಾಗಕ್ಕೆ ಗಂಭೀರ ಗಾಯಗಳಾಗಿದೆ.
ಉದ್ಯಮಿ ರಾಜ್ ಗೋಪಾಲ್ ಮೇಲೆ ಈ ದಾಳಿ ನಡೆದಿದೆ. ಬಸವನಗುಡಿಯ ಕೃಷ್ಣರಾವ್ ಪಾರ್ಕ್ ನಲ್ಲಿಅವರು ವಾಕ್ ಮಾಡುವಾಗ ದುಷ್ಕರ್ಮಿಗಳು ಏರ್ ಗನ್ ನಿಂದ ಗುಂಡು ಹಾರಿಸಿದ್ದಾರೆ. ರಾಜ್ ಗೋಪಾಲ್ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ 8:30 ರ ಸುಮಾರಿಗೆ ಈ ಘಟನೆ ನಡೆದಿದೆ.
ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ರಾಜ್ ಗೋಪಾಲ್ ನರ್ತಕಿ, ಕಾರ್ಗಿಲ್ ಬಾರ್ ನ ಮಾಲೀಕರಾಗಿದ್ದು, ಬೆಂಗಳೂರಿನ ಮೆಜೆಸ್ಟಿಕ್ ಸುತ್ತಮುತ್ತ ಹಲವು ಮಳಿಗೆಗಳನ್ನ ಬಾಡಿಗೆಗೆ ನೀಡಿದ್ದಾರೆ. ಯಾವ ಕಾರಣಕ್ಕೆ ಇವರ ಮೇಲೆ ಕೊಲೆಗೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.
