ಬೆಳಗಾವಿ: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ದುಷ್ಕರ್ಮಿಗಳು ಕೀಟನಾಶಕ ಬೆರೆಸಿದ್ದು, ಈ ನೀರು ಕುಡಿದ 12 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಘಟನೆ ನಡೆದಿದೆ. ಆರು ವಿದ್ಯಾರ್ಥಿನಿಯರು, ಆರು ವಿದ್ಯಾರ್ಥಿಗಳು ನೀರು ಕುಡಿದಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಎಲ್ಲರೂ ಆರೋಗ್ಯವಾಗಿದ್ದಾರೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳು, ಶಾಲೆಯ ಮುಖ್ಯ ಶಿಕ್ಷಕರು ಸವದತ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿಷ ಮಿಶ್ರಿತ ನೀರನ್ನು ಎಫ್ಎಸ್ಎಲ್ ವರದಿಗೆ ಕಳುಹಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಎಲ್ಲ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.