HomeKarnatakaಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಸುಟ್ಟು ಕರಕಲಾದ ಸಮವಸ್ತ್ರ, ಪಠ್ಯಪುಸ್ತಕ

ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಸುಟ್ಟು ಕರಕಲಾದ ಸಮವಸ್ತ್ರ, ಪಠ್ಯಪುಸ್ತಕ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗುಂಟ್ರಾಳ ಗ್ರಾಮದ ಸರ್ಕಾರಿ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಶಾಲೆಯಲ್ಲಿದ್ದ ಸಮವಸ್ತ್ರ, ಪಠ್ಯಪುಸ್ತಕಗಳು ಸುಟ್ಟು ಹೋಗಿವೆ.

ಶಾಲೆಯ ಆವರಣದಲ್ಲಿ ಅನೈತಿಕ ಚಟುವಟಿಕೆ ನಡೆಸದಂತೆ ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ/ ಶಾಲೆಯ ಆವರಣದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನ, ಧೂಮಪಾನ ಸೇರಿದಂತೆ ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಇತ್ತೀಚೆಗೆ ಶಾಲೆಯ ಬೀಗ ಮುರಿದು ಒಳಗೆ ಮಲಗಿದ್ದರು. ಶಾಲೆಯ ಎಸ್.ಡಿ.ಎಂ.ಸಿ. ಸದಸ್ಯರು ಮತ್ತು ಶಿಕ್ಷಕರು ಈ ರೀತಿ ಮಾಡದಂತೆ ತಾಕೀತು ಮಾಡಿ ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ.

 ಇದನ್ನು ಸಹಿಸದ ಕಿಡಿಗೇಡಿಗಳು ನಿನ್ನೆ ರಾತ್ರಿ ಶಾಲೆಯ ಬೀಗ ಮುರಿದು ಒಳಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಮಕ್ಕಳ ಸಮವಸ್ತ್ರ, ಪಠ್ಯ ಪುಸ್ತಕಗಳು ಸುಟ್ಟು ಕರಕಲಾಗಿವೆ. ಘಟನೆಯ ಬಗ್ಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಗಬ್ಬೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular