ಹೈದ್ರಾಬಾದ್‌ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಫಿಸಲ್ ಬಂದಾ ರಸ್ತೆಯಲ್ಲಿ ದಂಪತಿ ಮೂವರು ಮಕ್ಕಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ದಂಪತಿ ಹಾಗೂ ಮಕ್ಕಳು ಕಾರಿನಿಂದ ಹೊರಬಂದಿದ್ದಾರೆ. ಹಾಗಾಗಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ.
ಅಗ್ನಿಶಾಮಕ ದಳ ಕೂಡ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿ ಆರಿಸಿದೆ. ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ, ಕಾರು ಸಂಪೂರ್ಣ ಭಸ್ಮವಾಗುವ ಮುನ್ನ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದೆ.
#Watch: Hyderabad: Moving Car Catches Fire on Phisal Banda Road, Couple Escapes – Videohttps://t.co/0G1qtUcTnu
— TIMES NOW (@TimesNow) August 20, 2024