HomeKarnatakaರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಮುಟ್ಟಿ ಅಸಭ್ಯ ವರ್ತನೆ: ಕಾಮುಕ ಅರೆಸ್ಟ್

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಮುಟ್ಟಿ ಅಸಭ್ಯ ವರ್ತನೆ: ಕಾಮುಕ ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಒಂಟಿಯಾಗಿ ಓಡಾಡುವುದೂ ಕಷ್ಟವಾಗಿದೆ. ಕಾಮುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಯುವಕನೊಬ್ಬ ಮುಟ್ಟಿ ಅಸಭ್ಯವಗಿ ವರ್ತಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿ.ಎನ್.ಎಂ. ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾಮುಕನೊಬ್ಬ ಆಕೆಯ ಎದೆಭಾಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಜುಲೈ 30ರಂದು ನೆಲಮಂಗಲದ ಬಳಿ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿನಿ ಚೀರಾಡುತ್ತಿದ್ದಂತೆ ಆರೋಪಿ ಬೈಕ್ ಹತ್ತಿ ಪರಾರಿಯಾಗಿದ್ದ.

ವಿದ್ಯಾರ್ಥಿನಿ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಆರೋಪಿ ಬಸವರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಮೂಲದ ಈತ 8ನೇ ಮೈಲಿಯ ಅಪೋಲೋ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ. ಚಿಕ್ಕಬಾಣಾವರದ ಮಾರುತಿ ನಗರದಲ್ಲಿ ವಾಸವಾಗಿದ್ದ. ಜುಲೈ 30ರಂದು ರಾತ್ರಿ 9ಗಂಟೆ ಸುಮಾರಿಗೆ ವಿದ್ಯಾರ್ಥಿನಿ ರಸ್ತೆ ಬಳಿ ನಡೆದು ಹೋಗುತ್ತಿದ್ದಾಗ ಏಕಾಏಕಿ ಬೈಕ್ ನಲ್ಲಿ ಬಂದ ಬಸವರಾಜು ವಿದ್ಯಾರ್ಥಿನಿಯ ಎದೆಭಾಗ ಮುಟ್ಟಿದ್ದಾನೆ. ವಿದ್ಯಾರ್ಥಿನಿ ಕಿರುಚಾಡುತ್ತಿದ್ದಂತೆ ಪರಾರಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular