BREAKING : ಮಂಡ್ಯದಲ್ಲಿ ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ ಶವವಾಗಿ ಪತ್ತೆ, ಕೊಲೆ ಮಾಡಿ ಹೂತು ಹಾಕಿದ್ದ ದುಷ್ಕರ್ಮಿಗಳು

ಮಂಡ್ಯ : ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ನಿನ್ನೆ ಸಂಜೆ ನಡೆದಿದೆ.

ದೀಪಿಕಾ (28) ಎಂಬ ಮಹಿಳೆಯನ್ನು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಲಾಗಿದೆ. ಜ.20 ರಂದು ಶಾಲೆಗೆ ಹೋಗಿದ್ದ ಶಿಕ್ಷಕಿ ನಾಪತ್ತೆಯಾಗಿದ್ದರು. ನಂತರ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಆದರೆ ನಿನ್ನೆ ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿದೆ.

ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಜನವರಿ 20ರ ಮಧ್ಯಾಹ್ನನಿಂದ ದೀಪಿಕಾ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಿನ್ನೆ ಸಂಜೆ ದೀಪಿಕಾ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read