HomeKarnatakaಪ್ರೇಯಸಿ ಕುಟುಂಬದ ಸದಸ್ಯೆ ಅಲ್ಲ, ಪ್ರಿಯತಮೆ ವಿರುದ್ಧ ವರದಕ್ಷಿಣೆ ಕೇಸ್ ಸಲ್ಲದು: ಹೈಕೋರ್ಟ್ ಆದೇಶ

ಪ್ರೇಯಸಿ ಕುಟುಂಬದ ಸದಸ್ಯೆ ಅಲ್ಲ, ಪ್ರಿಯತಮೆ ವಿರುದ್ಧ ವರದಕ್ಷಿಣೆ ಕೇಸ್ ಸಲ್ಲದು: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೇಯಸಿ ಕುಟುಂಬದ ಸದಸ್ಯೆ ಅಲ್ಲ, ಪ್ರಿಯತಮೆಯ ವಿರುದ್ಧ ವರದಕ್ಷಿಣೆ ಕೇಸ್ ಸಲ್ಲದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ವರದಕ್ಷಿಣೆ ಕಿರುಕುಳ ಬೇಡಿಕೆ ಸಂಬಂಧ ಕ್ರೌರ್ಯ ಅಪರಾಧದಡಿ ಪತಿಯ ಕುಟುಂಬಸ್ಥರ ವಿರುದ್ಧ ಮಾತ್ರ ವಿಚಾರಣೆಗೊಳಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಅಪರಿಚಿತರು, ನೆರೆಹೊರೆಯವರು ಮತ್ತು ಪತಿಯ ಪ್ರಿಯತಮೆಯ ವಿರುದ್ಧ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ವಿವಾಹಿತ ಮಹಿಳೆಗೆ ಆಕೆಯ ಪತಿ ಅಥವಾ ಅವರ ಸಂಬಂಧಿಕರು ವರದಕ್ಷಿಣೆ ಬೇಡಿಕೆ ಮುಂದಿಟ್ಟು ಹಿಂಸೆ ದೌರ್ಜನ್ಯ ಕೌಟುಂಬಿಕ ಕ್ರೌರ್ಯ ಎಸಗಿದ ಆರೋಪಗಳ ಪ್ರಕರಣದಲ್ಲಿ ಪತಿಯ ಪ್ರೇಯಸಿಯನ್ನು ವ್ಯಾಜ್ಯದಲ್ಲಿ ಎಳೆತಂದು ನಿಲ್ಲಿಸುವುದು ಸಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೌಟುಂಬಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ನನ್ನನ್ನು ಐದನೇ ಆರೋಪಿಯಾಗಿ ಮಾಡಿ ಕ್ರಿಮಿನಲ್ ಅಪರಾಧಗಳ ವಿಚಾರಣೆಗೆ ಗುರಿಪಡಿಸಲಾಗಿದೆ. ಈ ಕುರಿತ ಎಫ್ಐಆರ್ ಮತ್ತು ಮೈಸೂರು ನ್ಯಾಯಾಲಯದಲ್ಲಿ ನಡೆಯುತ್ತಿರುವ ನನ್ನ ವಿರುದ್ಧದ ವಿಚಾರಣೆಗೆ ತಡೆ ನೀಡಬೇಕೆಂದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಅರ್ಜಿದಾರ ಮಹಿಳೆ ವಿರುದ್ಧದ ಪ್ರಕರಣ ರದ್ದುಪಡಿಸಿದ ನ್ಯಾಯಪೀಠ ವರದಕ್ಷಿಣೆ ಕಿರುಕುಳ ಬೇಡಿಕೆಗೆ ಸಂಬಂಧಿಸಿದಂತೆ ಕ್ರೌರ್ಯ ಅಪರಾಧದಡಿ ಭಾರತೀಯ ದಂಡ ಸಹಿಂತೆ ಅನುಸಾರ ಪತಿಯ ಕುಟುಂಬಸ್ಥರನ್ನು ಮಾತ್ರ ವಿಚಾರಣೆಗೆ ಗುರಿಪಡಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದೆ.

ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 498 ರ ಅಡಿ ವಿವಾಹಿತ ಮಹಿಳೆ ತನ್ನ ಪತಿ ಅಥವಾ ಸಂಬಂಧಿಕರು ವರದಕ್ಷಿಣೆ ಬೇಡಿಕೆ ಇಟ್ಟು ಹಿಂಸೆ ನೀಡಿದ ಅಪರಾಧ ಕುಟುಂಬ ಸದಸ್ಯರ ನಡುವಿನ ವಿವಾದಗಳಿಗೆ ಸಂಬಂಧಿಸಿದ್ದಾಗಿದೆ. ಪತಿಯ ಪ್ರೇಯಸಿ ಆ ಕುಟುಂಬದ ಸದಸ್ಯೆ ಎಂದು ಪರಿಗಣಿಸಲಾಗದು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular