ಬೆಂಗಳೂರು : ಜೂನ್-ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಿಲ್ಲ ಎಂದು ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಇದೀಗ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.
ಒಟ್ಟಿಗೆ ಜಮಾ ಆಗಲಿದೆ ಜೂನ್-ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ
ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಚುನಾವಣೆ ನೀತಿ ಸಂಹಿತೆಯಿಂದಾಗಿ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಸ್ಪಲ್ಪ ತಡವಾಗಿದೆ. ಇನ್ನೆರಡು ದಿನಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ ತಿಂಗಳದ್ದು ಇದೇ 15ರೊಳಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
https://twitter.com/KarnatakaVarthe/status/1810286391693066744?ref_src=twsrc%5Etfw%7Ctwcamp%5Etweetembed%7Ctwterm%5E1810286391693066744%7Ctwgr%5E6481b3b369ac3a51e45e440576ba0dd2234de53e%7Ctwcon%5Es1_&ref_url=https%3A%2F%2Fwww.kannadaprabha.com%2Fkarnataka%2F2024%2FJul%2F09%2F2-months-gruhalakshmi-scheme-money-will-be-credited-to-account-this-month-minister-laxmi-hebbalkar