HomeIndiaಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ದುರಂತ: 9 ಜನರು ಸಾವು; ಹಲವರ ಸ್ಥಿತಿ ಗಂಭೀರ

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ದುರಂತ: 9 ಜನರು ಸಾವು; ಹಲವರ ಸ್ಥಿತಿ ಗಂಭೀರ

ಭೋಪಾಲ್: ಕಳ್ಳಭಟ್ಟಿ ಸಾರಾಯಿ ಸೇವಿಸಿ 9 ಜನರು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಂಡಾ ತಹಸಿಲ್ ವ್ಯಾಪ್ತಿಯಲ್ಲಿ ನಡೆದಿದೆ.

ವಿಷಕಾರಿ ಮದ್ಯ ಸೇವಿಸಿ 9 ಜನರು ಮೃತಪಟ್ಟಿದ್ದು, ಹಲವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಮದ್ಯ ಸೇವಿಸಿದ ಬೆನ್ನಲ್ಲೇ ಜನರಲ್ಲಿ ತೀವ್ರ ವಾಂತಿ ಮತ್ತು ಎದೆನೋವು ಕಾಣಿಸಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಬರಜ್, ಘೂಘರ್, ನೌರಾಜ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ಈ ಮದ್ಯ ಸೇವಿಸಿದ್ದರು. ಕೆಲವೇ ಗಂಟೆಗಳಲ್ಲಿ ತೀವ್ರ ವಾಂತಿ, ಎದೆನೋವಿನಿಂದ ಬಳಲಿ 9 ಮಂದಿ ಸಾವನ್ನಪ್ಪಿದ್ದು, ಹಲವರನ್ನು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಬಂಡಾದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಈ ಬಗ್ಗೆ ಮಾತನಾಡಿದ್ದು, ಕಳೆದ 24 ರಿಂದ 48 ಗಂಟೆಗಳಲ್ಲಿ ಮದ್ಯ ಸೇವಿಸಿದವರು ಅಥವಾ ಸಣ್ಣ ಪ್ರಮಾಣದ ರೋಗಲಕ್ಷಣಗಳಿದ್ದರೂ ತಕ್ಷಣವೇ ಸಮೀಪದ ಸಿವಿಲ್ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಆರೋಗ್ಯ ಇಲಾಖೆಯ ವಿಶೇಷ ವೈದ್ಯರ ತಂಡಗಳು ಹಳ್ಳಿಗಳಲ್ಲಿ ಮನೆ-ಮನೆಗೆ ತೆರಳಿ ತಪಾಸಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಸುಜಾನಿಯಾ ನೇತೃತ್ವದ ಪೊಲೀಸ್ ಪಡೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ತನಿಖೆ ಚುರುಕುಗೊಂಡಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಸ್ಥಳೀಯವಾಗಿ ತಯಾರಿಸುವ ಕಳ್ಳುಬಟ್ಟಿಯಲ್ಲಿ ನಶೆ ಹೆಚ್ಚಿಸಲು ಕೈಗಾರಿಕಾ ಬಳಕೆಯ ವಿಷಕಾರಿ ರಾಸಾಯನಿಕ ‘ಮೀಥೈಲ್ ಆಲ್ಕೋಹಾಲ್’ ಬಳಸಲಾಗಿರುವ ಶಂಕೆ ವ್ಯಕ್ತವಾಗಿದೆ. ಇದು ನೇರವಾಗಿ ಮನುಷ್ಯನ ನರಮಂಡಲ ಮತ್ತು ಆಂತರಿಕ ಅಂಗಾಂಗಗಳನ್ನು ಕ್ಷಣಾರ್ಧದಲ್ಲಿ ನಿಷ್ಕ್ರಿಯಗೊಳಿಸುತ್ತದೆ. ಇನದ್ದೇ ಕಳ್ಳಭಟ್ಟಿ ತಯಾರಿಕೆಗೆ ಬಳಸಿದ್ದು, ಇದೇ ಕಾರಣಕ್ಕೆ ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಬಕಾರಿ ಇಲಾಖೆಯ ಸಿಬ್ಬಂದಿಯ ವೈಫಲ್ಯದ ಬಗ್ಗೆಯೂ ತನಿಖೆಗೆ ಆದೇಶಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಮದ್ಯದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಬಂದ ಬಳಿಕೆ ಸಾವಿಗೆ ಕಾರಣವಾದ ಅಂಶದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ

ಕಳೆದ ತಿಂಗಳು ಗುಜರಾತ್‌ನ ಭಾವನಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 13 ಜನರು ಸಾವನ್ನಪ್ಪಿದ್ದರು. 12ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಶಂಕಿತ ಅಕ್ರಮ ಮದ್ಯ ಮಾರಾಟಗಾರರನ್ನು ಬಂಧಿಸಲಾಗಿದೆ. ತನಿಖೆಯಲ್ಲಿ ಮದ್ಯದಲ್ಲಿ 38.59% ಮೆಥನಾಲ್ ಇರುವುದು ಕಂಡುಬಂದಿತ್ತು.

ಗುಜರಾತ್ ನಲ್ಲಿ ಮದ್ಯವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಮದ್ಯ ತಯಾರಿಕೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಆದಾಗ್ಯೂ ನಕಲಿ ಮದ್ಯ ಸೇವಿಸಿ ದುರಂತ ಸಂಭವಿಸಿತ್ತು. ಈ ಘಟನೆ ಬೆನ್ನಲ್ಲೇ ಪೊಲೀಸರು ರಾಜ್ಯಾದ್ಯಂತ ನಿಗಾ ವಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular