HomeKarnatakaBIG NEWS: ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ; ಶಾಸಕರು ಅಪಾಯದಿಂದ ಪಾರು

BIG NEWS: ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ; ಶಾಸಕರು ಅಪಾಯದಿಂದ ಪಾರು

ಮೈಸೂರು: ಕೋಲಾರ ಜಿಲ್ಲೆ ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ಬಳಿ ನಡೆದಿದೆ.

ಮೈಸೂರಿನ ನಾಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚುನಾವಣಾ ಪ್ರಚಾರ ಮುಗಿಸಿ ವಾಪಾಸ್ ಆಗುತ್ತಿದ್ದಾಗ ತಡ ರಾತ್ರಿ ಶಾಸಕರ ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ.

ಅದೃಷ್ಟವಶಾತ್ ಶಾಸಕ ಎ.ಆರ್.ಕೃಷ್ಣಮೂರ್ತಿ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular