ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕಾಲೇಜಿನಲ್ಲೂ ಬಿಸಿಯೂಟ

ಹಾವೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಮೈಸೂರು, ತುಮಕೂರು ಸೇರಿ ಹಲವೆಡೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ.

ರಾಣೆಬೆನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶಾಸಕ ಅರುಣ್ ಕುಮಾರ್ ಪೂಜಾರ ಬಿಸಿಯೂಟದ ವ್ಯವಸ್ಥೆ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ಅವರು ಬಿಸಿಯೂಟ ವ್ಯವಸ್ಥೆ ಮಾಡಿರುವುದು ವಿದ್ಯಾರ್ಥಿಗಳಿಗೆ ಖುಷಿ ತಂದಿದೆ.

ರಾಣೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 1,700 ವಿದ್ಯಾರ್ಥಿಗಳಿದ್ದು, ಕಾಲೇಜು ಹೊರವಲಯದಲ್ಲಿರುವ ಕಾರಣ ಏನೂ ಸಿಗುವುದಿಲ್ಲ. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳು ಬೆಳಿಗ್ಗೆಯಿಂದ ಸಂಜೆಯವರೆಗೂ ಉಪವಾಸದಿಂದ ಅಧ್ಯಯನ ಮಾಡಬೇಕಾದ ಪರಿಸ್ಥಿತಿ ಇದೆ. ಇದನ್ನು ಮನಗಂಡ ಶಾಸಕ ಅರುಣ್ ಕುಮಾರ್ ಪೂಜಾರ ಮಧ್ಯಾಹ್ನದ ಊಟ ನೀಡಲು ಮುಂದಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read