HomeKarnatakaಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಕಲಬುರಗಿ: ಚಿಂಚೋಳಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ಮೀಸಲು ಪಡೆ ಹಾಗೂ ಸ್ಥಳೀಯ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಅವಿನಾಶ್ ಜಾಧವ್ ನಿನ್ನೆ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾಗ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ್ದಾರೆ. ತಡ ರಾತ್ರಿಯೇ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular