HomeKarnatakaBIG NEWS: ಡಿ.ಕೆ.ಶಿವಕುಮಾರ್ ಅವ್ರನ್ನು ಮೊದಲು ಸಿಎಂ ಮಾಡಲಿ; ಬಳಿಕ ಡಜನ್ ಜನರನ್ನು ಡಿಸಿಎಂ ಮಾಡಲಿ;...

BIG NEWS: ಡಿ.ಕೆ.ಶಿವಕುಮಾರ್ ಅವ್ರನ್ನು ಮೊದಲು ಸಿಎಂ ಮಾಡಲಿ; ಬಳಿಕ ಡಜನ್ ಜನರನ್ನು ಡಿಸಿಎಂ ಮಾಡಲಿ; ಶಾಸಕ ಬಸವರಾಜ್ ಶಿವಗಂಗಾ ಒತ್ತಾಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಕ್ಕೆ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ್ ಶಿವಗಂಗಾ, ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಹೆಚ್ಚುವರಿ ಡಿಸಿಎಂ ಹುದ್ದೆ ಆಮೇಲೆ. ಮೊದಲು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲಿ. ಬಳಿಕ ಡಜನ್ ಜನರನ್ನು ಡಿಸಿಎಂ ಮಾಡಲಿ. ನಮಗೆ ಅಭ್ಯಂತರವಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿದ್ದವರನ್ನು ಸಿಎಂ ಮಾಡೋದು ಪದ್ಧತಿ. ಈ ನಿಟ್ಟಿನಲ್ಲಿ ಮೊದಲು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲಿ. ನಂತರ ಎಷ್ಟು ಬೇಕಾದರೂ ಡಿಸಿಎಂ ಹುದ್ದೆ ಸೃಷ್ಟಿಸಲಿ. ಇನ್ನು ಎಂಪಿ ಚುನಾವಣೆಯಲ್ಲಿ ಗೆಲ್ಲಿಸದ ಸಚಿವರನ್ನು ಸಂಪುಟದಿಂದ ಕೈಬಿಡಲಿ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಿ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular