HomeKarnatakaವಾಟ್ಸಾಪ್ ಸಂದೇಶಕ್ಕೆ ಸ್ಪಂದಿಸಿ ಶಾಸಕರಿಂದ ರಸ್ತೆ ದುರಸ್ತಿ

ವಾಟ್ಸಾಪ್ ಸಂದೇಶಕ್ಕೆ ಸ್ಪಂದಿಸಿ ಶಾಸಕರಿಂದ ರಸ್ತೆ ದುರಸ್ತಿ

ದಾವಣಗೆರೆ: ಸಾಸಲು- ಸಂತೇಬೆನ್ನೂರು ಸಂಪರ್ಕ ಕಲ್ಪಿಸುವ ರಸ್ತೆ ತೀವ್ರವಾಗಿ ಹಾಳಾಗಿದ್ದು, ಹಲವಾರು ಬಾರಿ ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ರಸ್ತೆ ಸರಿಪಡಿಸುವಂತೆ ಸೂಚಿಸಿದ್ದರೂ ಸಬೂಬು ಹೇಳುತ್ತಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇಂದು ರಸ್ತೆ ಸರಿ ಪಡಿಸಿದ್ದಾರೆ.

ಶಾಸಕರ ಖಡಕ್ ಸೂಚನೆಗೆ 24 ಗಂಟೆಯ ಅವಧಿಯಲ್ಲಿಯೇ ರಸ್ತೆ ಸರಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ರಸ್ತೆ ಹದಗೆಟ್ಟ ಹಿನ್ನೆಲೆ ವಾಟ್ಸಾಪ್ ಮೂಲಕ ಶಾಸಕರಿಗೆ ಮಾಹಿತಿ ನೀಡಲಾಗಿತ್ತು,

ಒಂದೆಡೆ ಮಳೆ, ರಸ್ತೆಯಲ್ಲಿ ಉಂಟಾಗಿರುವ ಗುಂಡಿ, ತಗ್ಗುಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದ್ದ ಹಿನ್ನೆಲೆ ಶಾಸಕರು ತಕ್ಷಣ ಸ್ಪಂದಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ತಿಳಿಸಿದ್ದು, ರಸ್ತೆ ಸರಿಪಡಿಸಲಾಗಿದೆ. ಸಾರ್ವಜನಿಕರ ನೆಮ್ಮದಿಗೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಬಿಡುವಿಲ್ಲದ ಕಾರ್ಯಕಲಾಪಗಳ ನಡುವೆ ಚನ್ನಗಿರಿ ತಾಲ್ಲೂಕಿನ ಸಾರ್ವಜನಿಕರ ವಾಟ್ಸಾಪ್ ಸಂದೇಶ ಗಮನಿಸಿ, ಅದಕ್ಕೆ ಸೂಕ್ತ ಕ್ರಮವಹಿಸಲು ಸೂಚಿಸಿ, ನಿರಂತರವಾಗಿ ರಸ್ತೆ ಕೆಲಸದ ಮಾಹಿತಿ ಪಡೆದು ರಸ್ತೆ ಸರಿಪಡಿಸುವವರೆಗೂ ಕಾಳಜಿ ವಹಿಸಿದ ಶಾಸಕರು ಜನರಿಗೆ ತೊಂದರೆಯಾಗದಂತೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಾಸಕರ ಸ್ಪಂದನೆಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದು, ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular