ಬೆಂಗಳೂರು : ರೌಡಿಶೀಟರ್ ‘ಬಿಕ್ಲುಶಿವ’ ಕೊಲೆ ಕೇಸ್ ನಲ್ಲಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಾಗಿದೆ. ನಿನ್ನೆಯಿಂದ ಭೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಿಐಡಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಹೌದು. ರೌಡಿಶೀಟರ್ ‘ಬಿಕ್ಲುಶಿವ’ ಕೊಲೆ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಕೋಕಾ ಕಾಯಿದೆ ಅನ್ವಯವಾಗುವುದಿಲ್ಲವೆಂದು ಹೈಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಹಾಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್ ನಿರಾಕರಿಸಿದೆ. . ಭೈರತಿ ಬಸವರಾಜ್ ಗೆ ಬಂಧನ ಭೀತಿ ಎದುರಾಗಿದ್ದು, ನಿನ್ನೆಯಿಂದ ಭೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಿಐಡಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಸಿಐಡಿ ಕಚೇರಿ ಎದುರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ನಾಪತ್ತೆಯಾಗಿರುವ ಭೈರತಿ ಬಸವರಾಜ್ ಬಂಧನಕ್ಕೆ ಗೋವಾ, ಮಹಾರಾಷ್ಟ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.
ರೌಡಿಶೀಟರ್ ‘ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು.ರೌಡಿಶೀಟರ್ ‘ಬಿಕ್ಲು ಶಿವ’ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ‘FIR’ ರದ್ದು ಕೋರಿ ಶಾಸಕ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು .ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಮಾಡಲಾಗಿತ್ತು.

