HomeKarnatakaBIG NEWS: 40 ಶಾಸಕರಿಗೆ ರಾಜಕೀಯ ಕಾರ್ಯದರ್ಶಿ, ನಿಗಮ –ಮಂಡಳಿಯಲ್ಲಿ ಅವಕಾಶ: ಇಂದು ಸಂಜೆಯೊಳಗೆ ಪಟ್ಟಿ...

BIG NEWS: 40 ಶಾಸಕರಿಗೆ ರಾಜಕೀಯ ಕಾರ್ಯದರ್ಶಿ, ನಿಗಮ –ಮಂಡಳಿಯಲ್ಲಿ ಅವಕಾಶ: ಇಂದು ಸಂಜೆಯೊಳಗೆ ಪಟ್ಟಿ ಪ್ರಕಟ

ಬೆಂಗಳೂರು: ಇಂದು ಸಂಜೆಯೊಳಗೆ ನಿಗಮ –ಮಂಡಳಿ ನೇಮಕ ಆಯ್ಕೆ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಮೊದಲಿಗೆ 25 ಶಾಸಕರಿಗೆ ನಿಗಮ -ಮಂಡಳಿಗಳಲ್ಲಿ ಅವಕಾಶ ನೀಡಲಿದ್ದು, ವಿಧಾನ ಪರಿಷತ್ ನ 4-5 ಸದಸ್ಯರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

5-8 ಶಾಸಕರನ್ನು ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಈಗಾಗಲೇ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕವಾಗಿದ್ದು, ಹೆಚ್ಚುವರಿಯಾಗಿ 5-8 ರಾಜಕೀಯ ಕಾರ್ಯದರ್ಶಿಗಳು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 3-4 ರಾಜಕೀಯ ಕಾರ್ಯದರ್ಶಿಗಳ ನೇಮಕ ಮಾಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಟ್ಟು 38 – 40 ಶಾಸಕರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ನಿಗಮ –ಮಂಡಳಿ, ರಾಜಕೀಯ ಕಾರ್ಯದರ್ಶಿ ಸೇರಿದಂತೆ 38 -40 ಸ್ಥಾನಗಳಿಗೆ ನೇಮಕಾತಿ ಮಾಡಲಿದ್ದು, ಇಂದು ಸಂಜೆ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕಾತಿ ನಿರೀಕ್ಷೆಯಲ್ಲಿ ಶಾಸಕರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular