HomeKarnatakaಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಾಟಾ ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ.

ಶಾಸಕ ದಿನಕರ್ ಶೆಟ್ಟಿ ಸಹೋದರ ಮಧುಕರ್ ಶೆಟ್ಟಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದೆ. ಕುಮಟಾ ನಗರದ ಕೊಪ್ಪಳಕರವಾಡಿ ವಾರ್ಡ್ ನಲ್ಲಿನ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ಮಧುಕರ ಶೆಟ್ಟಿ ಪತ್ನಿ ಲತಾ ಗಾಯಗೊಂಡಿದ್ದಾರೆ.

ಮನೆಯಲ್ಲಿ ಅಡುಗೆ ಸಿಬ್ಬಂದಿಗಳು ಅಡುಗೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗುತ್ತಿದೆ ಎಂದು ಗಮನಸಿದ ಸಿಬ್ಬಂದಿಗಳು ಹಾಗೂ ಮನೆಯವರು ತಕ್ಷಣ ಮನೆಯಿಂದ ಹೊರಬಂದಿದ್ದಾರೆ. ಕೆಲ ಸಮಯದ ಬಳಿಕ ಮನೆ ಒಳಗೆ ಹೋಗುತ್ತಿದ್ದಂತೆ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಮಧುಕರ್ ಶೆಟ್ಟಿ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯಲ್ಲಿದ್ದ ಪೀಠೋಪಕರಣಗಳು, ಟಿವಿ ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular