HomeLatest NewsBREAKING : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ 'ಹೆಚ್.ವೈ ಮೇಟಿ'...

BREAKING : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಕ್ರಿಯೆ : CM ಸಿದ್ದರಾಮಯ್ಯ

ಬೆಂಗಳೂರು : ನಾಳೆ ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಹೆಚ್.ವೈ ಮೇಟಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್.ವೈ.ಮೇಟಿಯವರ ಪಾರ್ಥಿವ ಶರೀರದ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30 ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದೆ. ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ. ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಜನರೊಂದಿಗಿನ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದರಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ, ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ಸ್ಥಳಾಂತರಿಸಲಾಗುವುದು. ನಾಳೆ ಮಧ್ಯಾಹ್ನ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಮೇಟಿಯವರ ಅಂತ್ಯಕ್ರಿಯೆ ನಡೆಯಲಿದ್ದು, ನಾನು ಸಹ ಪಾಲ್ಗೊಳ್ಳಲಿದ್ದೇನೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular