HomeKarnatakaBREAKING NEWS: ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ; ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

BREAKING NEWS: ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ; ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಾಜಿ ಕಾರ್ಪೊರೇಟರ್ ಪದ್ಮರಾಜು ಎಂಬಾತ ರಾತ್ರಿ 11 ಗಂಟೆಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಲ್ಲದೇ ಕೆಟ್ಟ ಪದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪದ್ಮರಾಜು ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ಪದ್ಮರಾಜು ಮಗಳಿಗೆ ನಾನೇ ಕೆಲಸ ಕೊಡಿಸಿದ್ದೆ. ಈ ಹಿಂದೆ ಬೇರೆ ಶಾಸಕರಿಗೂ ಬೆದರಿಕೆ ಹಾಕಿದ್ದ. ಈಗ ನನಗೆ ಬೆದರಿಕೆ ಹಾಕಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಆತ ಆಡುವ ಮಾತುಗಳನ್ನು ಕೇಳಲು ಸಾಧ್ಯವಿಲ್ಲ ಕೆಟ್ಟ ಪದಗಳಿಂದ ನಿಂದಿಸಿದ್ದಾನೆ. ಸಿಎಂ ಹಾಗೂ ಗೃಹ ಸಚಿವರಿಗೂ ದೂರು ನೀಡಿದ್ದೇನೆ. ಪದ್ಮರಾಜುನನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular