ಹೊಸಪೇಟೆ(ವಿಜಯನಗರ ಜಿಲ್ಲೆ): ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದು ಕಳವು ಮಾಡಲಾಗಿದೆ.
ವಿಜಯನಗರ ಜಿಲ್ಲೆ ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಕಚೇರಿ ಬೀಗ ಮುರಿದು ಕಳವು ಮಾಡಲಾಗಿದೆ.
ರಾತ್ರಿ ಒಂದು ಗಂಟೆಯಿಂದ ಬೆಳಗಿನ ಜಾವ 4 ಗಂಟೆ ನಡುವೆ ಕಳ್ಳತನ ನಡೆಸಲಾಗಿದೆ. 2.5 ಲಕ್ಷ ರೂಪಾಯಿ ನಗದು, 10.80 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳವು ಮಾಡಲಾಗಿದೆ. ಶಾಸಕರ ಕಚೇರಿಗೆ ನುಗ್ಗಿದ್ದ ನಾಲ್ವರು ಮಸುಕುಧಾರಿಗಳು ನಗ, ನಾಣ್ಯ ದೋಚಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.