HomeKarnatakaರಾಜ್ಯದ 4 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ರಾಜ್ಯದ 4 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ.

ಹಾಲಿ ವಿಧಾನಸಭೆಯ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ಎದುರಾಗಲಿದೆ.

ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ, ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ವಿಧಾನಪರಿಷತ್ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದು, ಈ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದು ಖಚಿತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular