HomeKarnatakaBREAKING NEWS: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

BREAKING NEWS: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

ಕೋಲಾರ: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ. ಮುನಿರತ್ನ ಕೋಲಾರದಿಂದ ಆಂಧ್ರಪ್ರದೇಶಕ್ಕೆ ಹೊರಟಿದ್ದರು. ಈ ವೇಳೆ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ ಹಾಗೂ ಮಾಜಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಪ್ರಕರಣ ಸಂಬಂಧ ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿತ್ತು. ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಮುನಿರತ್ನ ಆಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular