HomeKarnatakaಶಾಸಕರ ಕ್ಷೇತ್ರದಲ್ಲೇ ಗಾಂಜಾ ಮಾರಾಟ; ಮುನಿರತ್ನ ವಿರುದ್ಧ ದೂರು ದಾಖಲು

ಶಾಸಕರ ಕ್ಷೇತ್ರದಲ್ಲೇ ಗಾಂಜಾ ಮಾರಾಟ; ಮುನಿರತ್ನ ವಿರುದ್ಧ ದೂರು ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಶಾಸಕರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ.

ಬೆಂಗಳೂರಿನ ಆರ್.ಆರ್.ನಗರದ ವಾರ್ಡ್ ವೊಂದರಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ತಮ್ಮ ಕ್ಷೇತ್ರದ ವಾರ್ಡ್ ವೊಂದರಲ್ಲಿಯೇ 14ಕೆ.ಜಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ಗಣೇಶೋತ್ಸವ ಕಾರ್ಯಕ್ರಮವೊಂದರಲ್ಲಿ ಶಾಸಕ ಮುನಿರತ್ನ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಯುವಕ ಸಂತೋಷ್ ಎಂಬಾತ ಸಿಸಿಬಿ ಪೊಲೀಸರಿಗೆ ದೂರು ನೀಡಿ ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡ್ರಗ್ ಪೆಡ್ಲರ್ ಗಳು ಪೊಲೀಸರ ಜೊತೆಯೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಆದರೂ ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಯುವಕ, ಮಾಜಿ ಕಾರ್ಪೊರೇಟರ್ ವೆಂಕಟೇಶ್ ವಿರುದ್ಧವೂ ದೂರು ನೀಡಿದ್ದಾನೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular