HomeKarnatakaBIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ...

BIG NEWS: 24 ಗಂಟೆ ಕಳೆದರೂ ನಿಲ್ಲದ ಇಡಿ ಪರಿಶೀಲನೆ; ಶಾಸಕ ಭರತ್ ರೆಡ್ಡಿ ನಿವಾಸದ ಮೇಲೆ ಮುಂದುವರೆದ ದಾಳಿ

ಬಳ್ಳಾರಿ: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ದಾಳಿ ಮುಂದುವರೆದಿದೆ. ಭರತ್ ರೆಡ್ಡಿ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಶನಿವಾರ ಬೆಳಿಗ್ಗೆ ದಾಳಿ ನಡೆಸಿದ್ದರು. ದಾಳಿ ಇಂದು ಕೂಡ ಮುಂದುವರೆದಿದೆ.

ಶನಿವಾರ ಬೆಳಿಗ್ಗೆ 6:30ಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು 24 ಗಂಟೆ ಮೇಲಾದರೂ ಪರಿಶೀಲನೆ ನಿಲ್ಲಿಸಿಲ್ಲ. ದಾಳಿ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಭರತ್ ರೆಡ್ಡಿ ಆಪ್ತರು, ಸಂಬಂಧಿಕರ ಮನೆಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭರತ್ ರೆಡ್ಡಿ ಚಿಕ್ಕಪ್ಪ ಪ್ರತಾಪ್ ರೆಡ್ಡಿ, ಅವರ ಆಪ್ತ ರತ್ನ ಬಾಬು, ಸತೀಶ್ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular