ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಶಾಸಕಿ ನಯನಾ ಮೋಟಮ್ಮ ಆಪ್ತನ ಮನೆಗೆ ನುಗ್ಗಿ ಕೈ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಈ ಘಟನೆ ನಡೆದಿದೆ. ನಯನಾ ಮೋಟಮ್ಮ ಆಪ್ತ ಆದಿತ್ಯ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿದೆ.
ರಾಹುಲ್ ಷರೀಪ್ ಮತ್ತು ಕೆಲವು ಕಾಂಗ್ರೆಸ್ ಕಾರ್ಯಕರ್ತರು ಆದಿತ್ಯ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಕೆಲವು ವಿಡಿಯೋ, ಆಡಿಯೋ ಇಟ್ಟುಕೊಂಡು ಆದಿತ್ಯ ಕೆಲವರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆದಿತ್ಯ ಅವರ ಮನೆಗೆ ನುಗ್ಗಿದ್ದಾರೆ. ಆದಿತ್ಯ ಅವರ ಹೆಂಡತಿ ಹೊಡಿಬೇಡಿ ಎಂದು ಕೇಳಿಕೊಳ್ಳುತ್ತಿದ್ದರೂ ಆದಿತ್ಯ ಅವರ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
