HomeKarnatakaBREAKING NEWS: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಅಪಘಾತ: ಬೈಕ್ ಸವಾರ ದುರ್ಮರಣ

BREAKING NEWS: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಅಪಘಾತ: ಬೈಕ್ ಸವಾರ ದುರ್ಮರಣ

ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾಅವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ (22) ಮೃತ ದುರ್ದೈವಿ. ಬೈಕ್ ನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular