ಬೆಂಗಳೂರು: ಉತ್ತರಕನ್ನಡ ಜಿಲ್ಲೆ ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಅವರ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಪಿಎಂಎಲ್ಎ ವಿಶೇಷ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಅದಿರಿನ ಅಕ್ರಮ ರಫ್ತಿನಿಂದ ಸರ್ಕಾರದ ಖಜಾನೆಗೆ ಸುಮಾರು 44.09 ಕೋಟಿ ರೂ. ನಷ್ಟ ಆಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮುಖ್ಯಸ್ಥರಾಗಿದ್ದು ಕಂಪನಿಯ ಮೂಲಕ ಬೇಲೇಕೇರಿ ಬಂದರಿನಿಂದ 8 ಲಕ್ಷ ಟನ್ ಅದಿರು ಅಕ್ರಮವಾಗಿ ರಫ್ತು ಮಾಡಲಾಗಿದೆ. ದಾಖಲೆಯಲ್ಲಿ ಕಂಪನಿಯ ಹೆಸರು ನಮೂದಿಸದೇ ಸಾಗಣೆ ಮಾಡಲಾಗಿದ್ದು, ಬೇನಾಮಿ ಸಾಗಣೆಯಿಂದ ರಾಜ್ಯದ ಬೊಕ್ಕಸಕ್ಕೆ 44 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ.
