HomeKarnatakaBREAKING : ಶಾಸಕ 'ವಿನಯ್ ಕುಲಕರ್ಣಿ'ಗೆ ಮತ್ತೆ ಶಾಕ್ : ಧಾರವಾಡ ಭೇಟಿಗೆ ಅವಕಾಶ ನೀಡದ...

BREAKING : ಶಾಸಕ ‘ವಿನಯ್ ಕುಲಕರ್ಣಿ’ಗೆ ಮತ್ತೆ ಶಾಕ್ : ಧಾರವಾಡ ಭೇಟಿಗೆ ಅವಕಾಶ ನೀಡದ ಕೋರ್ಟ್.!

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಕೋರ್ಟ್ ರದ್ದುಪಡಿಸಿದೆ.

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಪ್ರವೇಶಿಸದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿರ್ಬಂಧಿಸಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮೇಯರ್ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಅವಕಾಶ ಕೋರಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಶಾಸಕ ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿ ಕೋರ್ಟ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2016 ರ ಜೂನ್ 15 ರಂದು ಧಾರವಾಡದಲ್ಲಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆಗೆ ಬರಲು ಅವಕಾಶ ಇಲ್ಲ ಎಂದು ಈ ಹಿಂದೆಯೇ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular