ಮಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನಮಾನದ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಾಗಿ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ನ್ಯಾಯಾಲಯದಿಂದ ಅಧಿಕೃತವಾಗಿ ಆದೇಶ ಪತ್ರ ಬಂದು ಬಳಿಕ ವಿನಯ್ ಕುಲಕರ್ಣಿ ಶಾಸಕ ಸ್ಥಾನಮಾನದ ಬಗ್ಗೆ ತೀರ್ಮಾನಿಸುವುದಾಗಿ ತಿಳಿಸಿದ್ದಾರೆ.
ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮುಂದುವರೆಯುವ ಅವಕಾಶ ಇರುತ್ತದೆ. ಇಲ್ಲದಿದ್ದರೆ ಈಗಿನ ನ್ಯಾಯಾಲಯದ ಆದೇಶ ದೊರೆತ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

