ಬೆಂಗಳೂರು: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿದ್ದ 55 ಕೋಟಿ ರೂ. ಜಪ್ತಿ ಮಾಡಲಾಗಿದೆ. 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂಪಾಯಿ ಜಪ್ತಿ ಮಾಡಲಾಗಿದೆ. ಐದು ದುಬಾರಿ ವಾಹನಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಧಿಸಿದಂತೆ ಇಡಿ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ ಎನ್ನಲಾಗಿದೆ.