HomeLatest Newsಶಾಸಕ ವೀರೇಂದ್ರ ಪಪ್ಪಿ ಅಕ್ರಮ ಬೆಟ್ಟಿಂಗ್ ಕೇಸ್: 55 ಕೋಟಿ ರೂ. ಜಪ್ತಿ 5 ದುಬಾರಿ...

ಶಾಸಕ ವೀರೇಂದ್ರ ಪಪ್ಪಿ ಅಕ್ರಮ ಬೆಟ್ಟಿಂಗ್ ಕೇಸ್: 55 ಕೋಟಿ ರೂ. ಜಪ್ತಿ 5 ದುಬಾರಿ ವಾಹನ ವಶಕ್ಕೆ

ಬೆಂಗಳೂರು: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿದ್ದ 55 ಕೋಟಿ ರೂ. ಜಪ್ತಿ ಮಾಡಲಾಗಿದೆ. 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂಪಾಯಿ ಜಪ್ತಿ ಮಾಡಲಾಗಿದೆ. ಐದು ದುಬಾರಿ ವಾಹನಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಧಿಸಿದಂತೆ ಇಡಿ ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular