ವಿಜಯಪುರ: ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆಯ ಚಿಂತನೆ ಆರಂಭವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳ ಒಳ್ಳೆಯ ದಿನ ಕೆಲಸ ಆರಂಭಿಸಲಿದ್ದು, ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಿಗೆ ಭೇಟಿ ನೀಡುತ್ತೇನೆ. ಹಿಂದೂ ಪರ ಸಂಘಟನೆಗಳು, ನಿರುದ್ಯೋಗಿ ಯುವಕರನ್ನು ಭೇಟಿ ಮಾಡಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸ್ಥಾಪನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ. ಹಿಂದುತ್ವ ಉದ್ಯೋಗ ಮತ್ತು ಅಭಿವೃದ್ಧಿ ಉದ್ದೇಶಗಳು ಇವೆ ಎಂದು ತಿಳಿಸಿದ್ದಾರೆ.
ತಮ್ಮ ಪಕ್ಷಕ್ಕೆ ಜೆಸಿಬಿ ಅಥವಾ ಬೋಲ್ಡೋಜರ್ ಚಿಹ್ನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್ ಅವರು, ಚುನಾವಣಾ ಆಯೋಗ ಯಾವ ಚಿಹ್ನೆ ಕೊಡುತ್ತದೆಯೋ ನೋಡೋಣ ಎಂದಿದ್ದಾರೆ.

