ಬೆಂಗಳೂರು: ಅಧ್ಯಯನದ ಹೆಸರಲ್ಲಿ ರಾಜ್ಯದ ಶಾಸಕರಿಗೆ ಫಾರಿನ್ ಟ್ರಿಪ್ ಭಾಗ್ಯ. 15ಕ್ಕೂ ಹೆಚ್ಚು ಶಾಸಕರು ವಿದೇಶ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪಶುಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಆಯೋಜಿಸಲಾಗಿದೆ. ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಗೆ ಶಾಸಕರಿಗೆ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಶಾಸಕರು ಫಾರಿನ್ ಪ್ರವಾಸಕ್ಕೆ ತೆರಳಿದ್ದಾರೆ.
ವಿದೇಶದಲ್ಲಿ ಪಶುಸಂಗೋಪನೆ, ಕೃಷಿ ಸೇರಿದಂತೆ ಯಾವರೀತಿ ಅಭಿವೃದ್ಧಿ ಸಾಧಿಸಲಾಗಿದೆ ಹಾಗೂ ಅವುಗಳನ್ನು ನಮ್ಮ ರಾಜ್ಯದಲ್ಲಿ ಹೇಗೆ ಅಳವಡಿಸಕೊಳ್ಳಬಹುದು ಎಂಬ ಬಗ್ಗೆ ಅಧ್ಯನ ನಡೆಸಿ ಶಾಸಕರು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಯಾವೆಲ್ಲ ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳುತ್ತಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಆದರೆ 15 ಶಾಸಕರು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ.

