BIG NEWS: ‘ಕೈ’ಶಾಸಕರ ಅಸಮಾಧಾನ ಶಮನ ಮಾಡಲು ಅನುದಾನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ತಣಿಸಲು ರಾಜ್ಯ ಸರ್ಕಾರ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿದೆ. ಈ ಮೂಲಕ ಅನುದಾನಕ್ಕಾಗಿ ಒತ್ತಾಯಿಸುತ್ತಿದ್ದ ಶಾಸಕರನ್ನು ಸಮಾಧಾನಪಡಿಸುವ ಕೆಲಸ ನಡೆದಿದೆ.

ಶಾಸಕರ ಕ್ಷೇತ್ರಗಳಿಗೆ ಪ್ರದೇಶಾಭಿವೃದ್ಧಿ ಯೋಜನೆಯಡಿ ಮೊದಲ ಕಂತು 145 ಕೋಟಿ ರೂಪಾಯಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರತಿ ಶಾಸಕರ ಕ್ಷೇತ್ರಕ್ಕೆ 50 ಲಕ್ಷ ಅನುದಾನ ಬಿಡುಗಡೆಯಾಗಿದೆ.

ಈ ಮೂಲಕ 224 ಕ್ಷೇತ್ರದ ಶಾಸಕರು, 67 ಎಂಎಲ್ ಸಿಗಳಿಗೆ ಅನುದಾನ ಸಿಕ್ಕಂತಾಗಿದೆ. ಇತ್ತೀಚೆಗೆ 135 ಶಾಸಕರ ಜೊತೆ ಖುದ್ದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಈ ವೇಳೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರು ಅಳಲು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮೊದಲ ಕಂತಿನಲ್ಲಿ 145 ಕೋಟಿ ಅನುದಾನ ಬಿಡುಗಡೆ ಮಾದಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read