HomeKarnatakaಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಕಲಬುರಗಿ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ವಿಧಾನ ಪರಿಷತ್ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ.

ಕಲಬುರಗಿಯ ಸೇಡಂ ರಿಂಗ್ ರಸ್ತೆಯ ಟೊಯೋಟಾ ಶೋರೂಮ್ ಬಳಿ ಘಟನೆ ನಡೆದಿದೆ. ಅರವಿಂದ ಕುಮಾರ್ ಅವರ ತಾಯಿ ಸುಮಿತ್ರಾ(75) ಅವರು ಬೀದರ್ ನಿಂದ ಕಲಬುರಗಿಯಲ್ಲಿರುವ ಅಳಿಯನ ಮನೆಗೆ ಬಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆ ದಾಟುವ ವೇಳೆ ಅಪರಿಚಿತ ಬೈಕ್ ಸವಾರ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಕುಸಿದು ಬಿದ್ದ ಸುಮಿತ್ರಾ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದ ಅರವಿಂದ ಕುಮಾರ್ ಅರಳಿ ವಿಷಯ ತಿಳಿದು ಕಲಬುರಗಿಗೆ ದೌಡಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular