HomeKarnatakaBREAKING: ರಾಜ್ಯದಲ್ಲಿ ವಕ್ಫ್ ವಿವಾದ ಹಿನ್ನೆಲೆ ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಕೈಬಿಡಲು ಸಿ.ಟಿ. ರವಿ...

BREAKING: ರಾಜ್ಯದಲ್ಲಿ ವಕ್ಫ್ ವಿವಾದ ಹಿನ್ನೆಲೆ ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಕೈಬಿಡಲು ಸಿ.ಟಿ. ರವಿ ಆಗ್ರಹ

ಹಾಸನ: ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಗೊಂದಲ ನಿರ್ಮಾಣವಾಗಿದೆ. ಹಾಗಾಗಿ ಜಮೀರ್ ಅಹ್ಮದ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯನವರೇ ನೀವು ವಕೀಲರಿದ್ದೀರಿ, ನೀವೇ ಹೇಳಿ. ಸಂವಿಧಾನಕ್ಕೆ ಮೀರಿದ ಕಾಯ್ದೆಯನ್ನು ನೀವು ಸಮರ್ಥನೆ ಮಾಡ್ತೀರಾ? ನಿಮಗೆ ಷರಿಯಾ ಮುಖ್ಯ ಆಗುತ್ತದೆಯೋ ಸಂವಿಧಾನ ಮುಖ್ಯ ಆಗುತ್ತದೆಯೋ? ಷರಿಯಾ ಮುಖ್ಯ ಅಲ್ಲ, ಸಂವಿಧಾನ ಮುಖ್ಯ ಎನ್ನುವುದಾದರೆ ಸಂವಿಧಾನದ ಪರ ನಿಮ್ಮ ಬದ್ಧತೆಯನ್ನು ಪ್ರಕಟಿಸಿ ಎಂದು ಆಗ್ರಹಿಸುತ್ತೇನೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular