HomeKarnatakaಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ...

ಮಾನವೀಯತೆ ಮೆರೆದ ಶಾಸಕ ಡಾ. ಧನಂಜಯ ಸರ್ಜಿ: ಅಸ್ವಸ್ಥರಾಗಿ ಕುಸಿದುಬಿದ್ದ ಅತಿಥಿ ಉಪನ್ಯಾಸಕಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಅತಿಥಿ ಉಪನ್ಯಾಸಕಿ ಅಸ್ವಸ್ಥರಾದ ಘಟನೆ ಬೆಳಗಾವಿಯ ಕೊಂಡಸಕೊಪ್ಪ ಸಮೀಪ ನಡೆದಿದೆ.

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದು. ಪ್ರತಿಭಟನಾ ಸ್ಥಳದಲ್ಲಿ ಅತಿಥಿ ಉಪನ್ಯಾಸಕಿ ಅಸ್ವಸ್ಥರಾಗಿದ್ದಾರೆ. ಈ ವೇಳೆ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾನವೀಯತೆ ಮೆರೆದಿದ್ದಾರೆ.

ಅಸ್ವಸ್ಥರಾಗಿದ್ದ ಉಪನ್ಯಾಸಕಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಮ್ಮ ಕಾರ್ ನಲ್ಲಿಯೇ ಕರೆದೊಯ್ದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಾ.ಧನಂಜಯ ಸರ್ಜಿ ಅವರು ಮನವಿಯನ್ನು ಸ್ವೀಕರಿಸಿ, ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಳ ಮಾಡುವಂತೆ ಈಗಾಗಲೇ ಅಧಿವೇಶನದಲ್ಲಿ ಚರ್ಚೆ ಮಾಡಲಾಗಿದ್ದು, ಈ ಸಂಬಂದ ಸಚಿವರ ಜೊತೆ ಸಭೆ ಕೂಡ ನಡೆಸಲಾಗಿದೆ. ಸಚಿವರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಧರಣಿ ನಿರತರನ್ನು ಕುರಿತು ಮಾತನಾಡುವ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರನೇ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಡಾ.ಧನಂಜಯ ಸರ್ಜಿ ಅವರು ಸ್ಥಳದ್ಲಲೇ ಪ್ರಥಮ ಚಿಕಿತ್ಸೆ ನೀಡಿ, ಖುದ್ದು ತಾವೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಕರ್ತವ್ಯ ಪ್ರಜ್ಞೆ ಮರೆದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular