ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ.

ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ 40 ನಾಮಪತ್ರಗಳು ಸಲ್ಲಿಕೆಯಾಗಿವೆ. ಮಂಗಳವಾರ 3 ಕಾಂಗ್ರೆಸ್, 13 ಪಕ್ಷೇತರ ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿದೆ. ಇವುಗಳಲ್ಲಿ 15 ಪುರುಷರು, ಒಬ್ಬರು ಮಹಿಳಾ ಅಭ್ಯರ್ಥಿಗಳಿದ್ದಾರೆ.

ಇದುವರೆಗೆ 40 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಕಾಂಗ್ರೆಸ್ 15, ಬಿಜೆಪಿ 3, ಜೆಡಿಎಸ್ 1 ಮತ್ತು ಪಕ್ಷೇತರರು 20 ಮಂದಿ ಇದ್ದಾರೆ. ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 3ರಂದು ಮತದಾನ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read