ಮೇಲ್ಮನೆ ಚುನಾವಣೆ: 6 ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಎರಡು ದಿನಗಳ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ.

ಕಣದಲ್ಲಿರುವ 78 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಗ್ಗೆ ಮತ ಎಣಿಕೆ ಆರಂಭವಾಗಲಿದ್ದು, ಪ್ರಾಶಸ್ತ್ಯದ ಮತಗಳ ಎಣಿಕೆ ನಡೆದು ಸಂಜೆಯೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಪ್ರಾದೇಶಿಕ ಬಾರು ಕೇಂದ್ರಗಳಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ.

ಆಯನೂರು ಮಂಜುನಾಥ್, ರಘುಪತಿ ಭಟ್, ಡಾ. ಧನಂಜಯ ಸರ್ಜಿ, ಮರೆತಿಬ್ಬೇಗೌಡ, ಕೆ.ಕೆ. ಮಂಜುನಾಥ್, ಎಸ್.ಎಲ್. ಭೋಜೇಗೌಡ, ಲೋಕೇಶ್ ತಾಳಿಕಟ್ಟೆ ಮೊದಲಾದವರು ಕಣದಲ್ಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read