BIG NEWS: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭಾರೀ ಅಂತರದ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516, ರಘುಪತಿ ಭಟ್ 7039, ಎಸ್.ಪಿ. ದಿನೇಶ್ 2518 ಮತ ಪಡೆದಿದ್ದಾರೆ.

ಮೈಸೂರಿನಲ್ಲಿ ಗುರುವಾರ ಮತ ಎಣಿಕೆ ನಡೆದಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮೊದಲನೇ ಪ್ರಾಶಸ್ತ್ಯದಲ್ಲೇ ಸುಮಾರು 24,111 ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ಸಾಧಿಸಿ ವಿಧಾನ ಪರಿಷತ್ ಗೆ ಆಯ್ಕೆ ಆದ ಬಳಿಕ ಚುನಾವಣಾಧಿಕಾರಿಗಳು ಡಾ.ಧನಂಜಯ ಸರ್ಜಿ ಅವರಿಗೆ ಪ್ರಮಾಣ ಪತ್ರ ವಿತರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read