HomeKarnatakaಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಪ್ರಕಟ

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇಂದು ವಿಧಾನ ಪರಿಷತ್ 6 ಸ್ಥಾನಕ್ಕೆ ಚುನಾವಣೆ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನ ಮುಗಿದ ಬೆನ್ನಲ್ಲೇ ಇಂದು ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ ಅಧಿಸೂಚನೆ ಪ್ರಕಟಿಸಲಾಗುವುದು.

ಮೂರು ಪದವೀಧರ, ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಜೂನ್ 3ರಂದು ಮತದಾನ, ಜೂನ್ 6ರಂದು ಮತ ಎಣಿಕೆ ನಡೆಯಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಮೇ 16 ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈಶಾನ್ಯ ಪದವೀಧರ, ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ಕರ್ನಾಟಕದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular