HomeKarnatakaಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ/ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರಗೊಂಡಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ನಾಮಪತ್ರಗಳ ಪೈಕಿ 9 ನಾಮಪತ್ರ ಅಂಗೀಕಾರವಾಗಿದ್ದು, ಪಕ್ಷೇತರ ಅಭ್ಯರ್ಥಿ ನಾಮಪತ್ರ ಮಾತ್ರ ತಿರಸ್ಕೃತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 20ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular