ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ ಸೋಮವಾರ ಬೆಳಗ್ಗೆ 11:30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಜಯಗಳಿಸಿದ್ದ ಪುಟ್ಟಣ್ಣ ಅವರ ಸದಸ್ಯತ್ವ 2026 ನವೆಂಬರ್ ವರೆಗೆ ಇತ್ತು. ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಫೆಬ್ರವರಿ 16ರಂದು ನಡೆಯಲಿರುವ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಇಂದು ಬೆಳಗ್ಗೆ ಪಾದಯಾತ್ರೆ ಮೂಲಕ ಶಾಂತಿನಗರದ ಟಿಟಿಎಂಸಿ ಎರಡನೇ ಮಹಡಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read