BREAKING NEWS: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಜಯ

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಜಯಗಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜೇಗೌಡ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವಿನ ನಗೆ ಬೀರಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ 5267 ಮತಗಳಿಂದ ಜಯಗಳಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಅವರು ಗೆಲುವು ಸಾಧಿಸಿದ್ದಾರೆ, ಭೋಜೇಗೌಡರ ಪರವಾಗಿ 9829 ಮತಗಳು ಚಲಾವಣೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ 4562 ಮತ ಪಡೆದುಕೊಂಡಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯ.

5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ ಭೋಜೇಗೌಡ

ಒಟ್ಟು ಚಲಾವಣೆ ಆಗಿದ್ದ ಮತ 19479.

ಕುಲಗೆಟ್ಟ ಮತಗಳ ಸಂಖ್ಯೆ 821.

18658 ಸಿಂಧು ಮತಗಳು.

9,330 ಖೋಟಾ ನಿಗದಿಯಾಗಿತ್ತು.

9,829 ಮತಗಳ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಸಾಧಿಸಿದ ಭೋಜೇಗೌಡ.

ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳು‌.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read