HomeKarnatakaಪರಿಷತ್ ಚುನಾವಣೆಗೆ ಮತದಾನ ಹಿನ್ನೆಲೆ ನಾಳೆ ರಜೆ ಮಂಜೂರು

ಪರಿಷತ್ ಚುನಾವಣೆಗೆ ಮತದಾನ ಹಿನ್ನೆಲೆ ನಾಳೆ ರಜೆ ಮಂಜೂರು

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಗೆ ಫೆಬ್ರವರಿ 16ರ ಶುಕ್ರವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದ ಹಕ್ಕು ಹೊಂದಿರುವ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮತಕ್ಷೇತ್ರಗಳಲ್ಲಿರುವ ಸರ್ಕಾರಿ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ರಜೆಗೆ ಅನುಮತಿ ನೀಡಲಾಗಿದೆ.

ನಗರ ಜಿಲ್ಲಾ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿರುವ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular